IMG 20210521 WA0015

ತುಮಕೂರು : ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ

DISTRICT NEWS ತುಮಕೂರು
  • ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ* ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು

ತುಮಕೂರು(ಕವಾ)ಮೇ.21: ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18-44 ವರ್ಷದ ಒಳಗಿನ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಮಂಚೂಣಿ ಕಾರ್ಯಕರ್ತರ ಇಲಾಖಾ ಮುಖ್ಯಸ್ಥರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಭೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಕೋವಿಡ್ ನಿಗ್ರಹಕ್ಕೆ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಇಲಾಖೆ ಮುಖ್ಯಸ್ಥರು ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಬೇಕು. ನಿಗಧಿ ಪಡಿಸಿದ ದಿನಾಂಕಗಳಂದು ಆಯಾ ಇಲಾಖೆ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕಾರ್ಯಕರ್ತರನ್ನು ಗುರುತಿಸಿ ಚಿಟಿಟಿexuಡಿe-3 ಅನುಬಂಧ ಪತ್ರದಲ್ಲಿ ಪ್ರಮಾಣೀಕರಿಸಿ ಅವರಿಗೆ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದರು.
ಕೊರೋನಾ ಮುಂಚೂಣಿ ಕಾರ್ಯಕರ್ತರೆಂದು ಗುರುತಿಸಲಾದ ಅಂಗವೈಕಲ್ಯ ಹೊಂದಿರುವ(ಮಾನಸಿಕ ಅಸ್ವಸ್ಥತೆ ಸೇರಿದಂತೆ) ಫಲಾನುಭವಿಗಳು ಮತ್ತು ಒಬ್ಬ ಆರೈಕೆದಾರರು, ಖೈದಿಗಳು, ಚಿತಾಗಾರ/ಸ್ಮಶಾನ/ರುದ್ರಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರಿಗೆ ಮೇ 22ರಂದು ಕೋವಿಡ್ ಲಸಿಕೆ ಹಾಕುವ ಕಾರ್ಯ ಪೂರ್ಣಗೊಳ್ಳಬೇಕು.
ಉಳಿದಂತೆ ನಿಗಧಿಪಡಿಸಿದ ಮೇ 23, 24, 25ರಂದು ಲಸಿಕೆ ಲಭ್ಯತೆ ನೋಡಿಕೊಂಡು

  • IMG 20210521 WA0019
  • IMG 20210521 WA0012
  • IMG 20210521 WA0015 1
  • IMG 20210521 WA0016


ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು, ಪ್ರಸ್ತುತ ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವವರು, ಅಂಚೆ ಇಲಾಖೆಯ ಸಿಬ್ಬಂದಿ, ಬೀದಿ ಬದಿ ವ್ಯಾಪಾರ ಮಾಡುವವರು, ಭದ್ರತೆ ಮತ್ತು ಕಛೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು, ವಯೋವೃದ್ಧರ / ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಾಧ್ಯಮದವರು, ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಯಿಲ್ ಇಂಡಸ್ಟ್ರಿ ಮತ್ತು ಗ್ಯಾಸ್ ಸರಬರಾಜು ಮಾಡುವವರು (ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡಂತೆ), ಔಷಧಿ ತಯಾರಿಸುವ ಕಂಪನಿಯ ಸಿಬ್ಬಂದಿಗಳು, ಆಸ್ಪತ್ರೆಗಳಿಗೆ ಆಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು, ಅಧಿಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು (ಉದಾಹರಣೆ: ವೃದ್ಧಾಶ್ರಮ ವಾಸಿಗಳು, ನಿರ್ಗತಿಕರು), ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು,
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ.)ಕೆಲಸಗಾರರಿಗೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಹಾಗೂ ಆದ್ಯತೆ ಗುಂಪುಗಳಾದ ಕಟ್ಟಡ ಕಾರ್ಮಿಕರು, ಟೆಲಕಾಮ್ ಮತ್ತು ಇಂಟರ್‍ನೆಟ್ ಸೇವಾದಾರರು, ವಿಮಾನಯಾನ ಸಂಸ್ಥೆಗಳ ಸಿಬ್ಬಂದಿ, ಬ್ಯಾಂಕ್ ಸಿಬ್ಬಂದಿ, ಪೆಟ್ರೋಲ್ ಬಂಕ್ ಕೆಲಸಗಾರರು,ಚಿತ್ರೋದ್ಯಮದ ಉದ್ಯಮಿ/ಕಾರ್ಯಕರ್ತರು/ಸಿಬ್ಬಂದಿ, ಅಡ್ವೊಕೇಟ್ ಗಳು, ಹೋಟೆಲ್ ಮತ್ತು ಆತಿಥ್ಯ ಸೇವಾದಾರರು, ಕೆ.ಎಂ.ಎಫ್ ,ರೈಲ್ವೆ, ಗಾಮೆರ್ಂಟ್ ಕಾರ್ಖಾನೆ, ಅರಣ್ಯ ಇಲಾಖೆ, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಉಂIಐ ಸಿಬ್ಬಂದಿ ಮತ್ತು ಖSಏ ಕೆಲಸಗಾರು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಆಟಗಾರರು, ಸ್ವಧಾರ್ ಗೃಹ ವಾಸಿಗಳು ಮತ್ತು ರಾಜ್ಯ ಮಹಿಳಾ ನಿಲಯ ವಾಸಿಗಳು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯ ಸಿಬ್ಬಂದಿಗಳಿಗೆ ಲಸಿಕಾಕರಣ ಮುಗಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖಾವಾರು ಅಧಿಕಾರಿಗಳಿದ್ದರು.