IMG 20210526 220406

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ  ಕೊರೊನಾ ವಾರಿಯರ್ಸ್….!

Genaral STATE

ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ  ಕೊರೊನಾ ವಾರಿಯರ್ಸ್ :  ಮುಖ್ಯಮಂತ್ರಿ ಘೋಷಣೆ

ಬೆಂಗಳೂರು, ಮೇ 26: – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಅವರು ಇಂದು ಬೆಳಗಾವಿ, ಬಳ್ಳಾರಿ, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳ ಆಯ್ದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಿಡಿಓ ಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ವಿವಿಧ ಪಂಚಾಯಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು ಈ ಘೋಷಣೆ ಮಾಡಿದರು.
ಕೋವಿಡ್ 19 ಸೋಂಕಿನ 2ನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓ ಗಳೊಂದಿಗೆ ಸಂವಾದ ನಡೆಸಿ, ಸ್ಥೈರ್ಯ ಮೂಡಿಸಿದರು.
ಕೊರೋನ 2ನೇ ಅಲೆ ಮೊದಲಿಗಿಂತ ವಿಭಿನ್ನವಾಗಿದೆ. ಹೆಚ್ಚು ಹಾನಿಕಾರಕವಾಗಿದೆ. ಕೊರೋನ ಸೊಂಕು ತ್ವರಿತವಾಗಿ ವ್ಯಾಪಿಸುತ್ತಿದ್ದು ತುರ್ತು ನಿವಾರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಳೆದ ವಾರ ಘೋಷಿಸಿದ ಪ್ಯಾಕೇಜ್ನಲ್ಲಿ ಎಲ್ಲಾ ಗ್ರಾಮ ಪಂಚಾಯತ್ಗಳಿಗೂ ಎಸ್.ಡಿ.ಆರ್.ಎಫ್ ನಿಧಿಯಿಂದ ತಲಾ ರೂ. 50,000/- ಗಳನ್ನು ಬಿಡುಗಡೆ ಮಾಡಲು ಆದೇಶಿಸಿರುತ್ತೇನೆ. ಸದ್ಯದಲ್ಲಿಯೇ ಹಣ ತಮ್ಮ ಕೈ ಸೇರಲಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈಗಾಗಲೇ 14ನೇ ಹಣಕಾಸು ಆಯೋಗದ ಅನುದಾನದ ಉಳಿಕೆ ಹಣ, 15ನೇ ಹಣಕಾಸು ಆಯೋಗದ ಅನಿರ್ಬಂದಿತ ಅನುದಾನ ಹಾಗೂ ಗ್ರಾಮ ಪಂಚಾಯತ್ ಸ್ವಂತ ಸಂಪನ್ಮೂಲವನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.
ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳು ಹಾಗೂ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಂತೆ, ಜಾತ್ರೆ ಮತ್ತಿತರ ಕಾರ್ಯಕ್ರಮಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.IMG 20210526 220422
ಸೋಂಕಿತರಿಗೆ ನೆರವಾಗಲು ಗ್ರಾಮ ಪಂಚಾಯತ್ಗಳಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಹೆಲ್ಪ್ ಲೈನ್ ಗಳನ್ನು ಪ್ರಾರಂಭಿಸಬೇಕು. ಕಾರ್ಯಪಡೆಗಳ ಜೊತೆ ಕಾರ್ಯನಿರ್ವಹಿಸಲು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಾನಿಗಳ ನೆರವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಯಲ್ಲಿದ್ದಲ್ಲಿ ಅವರಿಗೆ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಒಂದು ಪಕ್ಷ ಸೋಂಕಿತರು ಮೃತಪಟ್ಟು ಮಕ್ಕಳು ಅನಾಥರಾದಲ್ಲಿ ಅವರನ್ನು ಯಾರು ದತ್ತು ತೆಗೆದುಕೊಳ್ಳಲು ಬಿಡಬಾರದು. ಬದಲಾಗಿ ‘ಮಕ್ಕಳ ರಕ್ಷಣಾ ಸಮಿತಿ’ಗಳಿಗೆ ಸೇರಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆರ್.ಎ.ಟಿ. ಕಿಟ್ ಗಳನ್ನು ಒದಗಿಸಲು ಸೂಚನೆ:


ಬೆಳಗಾವಿ ಜಿಲ್ಲೆಯ ತೊಂಡಿಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಎನ್. ದೇಸಾಯಿ ಅವರು ಸಂವಾದದ ವೇಳೆ ತಮ್ಮ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ, ಜನರಿಗೆ ಸ್ಥೈರ್ಯ ತುಂಬಿರುವುದಾಗಿ ತಿಳಿಸಿದರು. ಗ್ರಾಮದಲ್ಲಿ ಪರೀಕ್ಷೆ ನಡೆಸಲು ಆರ್ ಎ ಟಿ ಕಿಟ್ ಗಳ ಕೊರತೆ ಇರುವುದರ ಕುರಿತು ಅವರು ಮುಖ್ಯಮಂತ್ರಿಯವರ ಗಮನ ಸೆಳೆದಾಗ, ಕೂಡಲೇ ಒದಗಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.