ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆಕಲಾವಿದರಿಗೆ ಆರ್ಥಿಕ ನೆರವು; ಅರ್ಜಿ ಆಹ್ವಾನ
ತುಮಕೂರು(ಕವಾ)ಮೇ28: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಕೋವಿಡ್ ಎರಡನೇ ಅಲೆಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ 3 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲು ಎಲ್ಲ ಪ್ರಕಾರದ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಆರ್ಥಿಕ ನೆರವು ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಫೋರ್ಟಲ್‍ನಲ್ಲಿ ಮೇ 28 ರಿಂದ ಜೂ.5ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೆರವು ಪಡೆಯುವ ಕಲಾವಿದರು ವೃತ್ತಿ ನಿರತರಾಗಿದ್ದು, ಆಯಾ ಕಲೆಯ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳು ಸೇವೆ ಸಲ್ಲಿಸಿರಬೇಕು ಹಾಗು 35 ವರ್ಷ ಮೇಲ್ಪಟ್ಟವರಾಗಿರಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಶಾಸನ ಪಡೆಯುತ್ತಿರಬಾರದು. ಯಾವುದೇ ಸರ್ಕಾರಿ ನೌಕರ( ರಾಜ್ಯ, ಕೇಂದ್ರ ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು, ಅಲೆ ಸರ್ಕಾರಿ ಸಂಸ್ಥೆಗಳು)ರಾಗಿರಬಾರದು. 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಸಾಂಸ್ಕøತಿಕ ಸಂಘ ಸಂಸ್ಥೆಗಳಿಗೆ ಧನಸಹಾಯ ಪಡೆದ, ವಾದ್ಯ ಪರಿಕರ / ವೇಷಭೂಷಣ ಖರೀದಿ, ಶಿಲ್ಪಕಲೆ, ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.
ಅರ್ಹ ಕಲಾವಿದರು ತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನೊಳಗೊಂಡ ಅರ್ಜಿಯನ್ನು ಜಿಲ್ಲೆಯಲ್ಲಿರುವ ಎಲ್ಲಾ ನಾಗರೀಕ ಸೇವಾ ಕೇಂದ್ರಗಳು ಅಥವಾ ಮೊಬೈಲ್ ಮೂಲಕ ಆನ್ ಲೈನ್ ನಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿಯೇ ಕಡ್ಡಾಯವಾಗಿ ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0816-2275204 ಅಥವಾ (ರಾಜೇಶ್) 9916891939, ಡಿ.ವಿಸುರೇಶ್ ಕುಮಾರ್ (9986276869), ಮೇಘನಾ (851075703) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು : ಕಲಾವಿದರಿಗೆ ಆರ್ಥಿಕ ನೆರವು….!